ರಥಬೀದಿಯಲ್ಲಿ ಕಾಲೇಜಿನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಮಂಗಳೂರು ವಲಯ ಸಂಯೋಜನಾಧಿಕಾರಿ ರಂಜನ್ ಅವರು, ಸಂಸ್ಥೆಯ ಧ್ಯೇಯೋದ್ದೇಶಗಳು ಮತ್ತು ಕಾರ್ಯಕ್ರಮದ ಪ್ರಸ್ತುತತೆಯನ್ನು ವಿವರಿಸಿದರು.
ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಬ್ರೆಸ್ಟ್ ಆಂಡ್ ಸರ್ಜಿಕಲ್ ಆಂಕಾಲಜಿಸ್ಟ್ ಡಾ. ದಿಶಿತ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ತನ ಕ್ಯಾನ್ಸರ್ ಮತ್ತು ಅದನ್ನು ಆರಂಭದಲ್ಲಿಯೇ ಪತ್ತೆ ಹಚ್ಚುವ ಕುರಿತು ವಿವರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಕ್ಯಾನ್ಸರ್ ಪತ್ತೆಹಚ್ಚುವ ವಿಧಾನಗಳ ವಿವರಗಳಿರುವ ಕರಪತ್ರಗಳನ್ನು ಬಿಡುಗಡೆ ಮಾಡಿ ವಿದ್ಯಾರ್ಥಿನಿಯರಿಗೆ ವಿತರಿಸಲಾಯಿತು. ಮತ್ತು ಭಿತ್ತಿ ಪತ್ರಗಳನ್ನು ಕಾಲೇಜಿನ ಮಹಿಳಾ ಶೌಚಾಲಯದೊಳಗೆ ವಿದ್ಯಾರ್ಥಿಗಳಿಗೆ ಓದಲು ಅನುಕೂಲವಾಗುವಂತೆ ಅಳವಡಿಸಲಾಯಿತು.
ಕಾಲೇಜಿನ ಪದವಿ ವಿಭಾಗದ ಶೈಕ್ಷಣಿಕ ಸಂಯೋಜಕಿ ಡಾ. ವಸಂತಿ ಪಿ., ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯ, ಎಮ್‌ಎಸ್‌ಡಬ್ಲ್ಯೂ ಸಂಯೋಜಕಿ ಅರುಣ ಕುಮಾರಿ, ಬೋಧಕ-ಬೋಧಕೇತರ ವೃಂದದವರು, ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.