ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ
Friday, November 28, 2025
ಮಂಗಳೂರು: ಪಡೀಲ್‌ನಲ್ಲಿರುವ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಪ್ರಜಾಸೌಧದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಚೇರಿ ನ.28ರಂದು ಉದ್ಘಾಟನೆಗೊಂಡಿತು.
ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ನಾಯಕರಾದ ಶಶಿಧರ ಹೆಗ್ಡೆ, ಪದ್ಮರಾಜ್. ಆರ್. ಸಂತೋಷ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪ್ರವೀಣ್‌ಚಂದ್ರ ಆಳ್ವ, ಅಪ್ಪಿ, ಭಾಸ್ಕರ ಮೊಲಿ, ಪಿಯುಸ್ ರಾಡ್ರಿಗಸ್, ಶಬೀರ್ ಸಿದ್ದಕಟ್ಟೆ ಮೊದಲಾದವರಿದ್ದರು.

