ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಪ್ರಧಾನಿಗೆ ಮುಖ್ಯಮಂತ್ರಿ ಮನವಿ ಪತ್ರ: ಪ್ರಧಾನಿಗೆ ಮನವಿ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್
ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ಆಗಮಿಸಿದ ಪ್ರಧಾನಿಯವರನ್ನು ಸ್ವಾಗತಿಸಲಾಯಿತು.
ಈ ವೇಳೆ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲದೆ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ಕಲ್ಪಿಸುವಲ್ಲಿ ಕೇಂದ್ರ ಸರಕಾರ ಇಚ್ಛಾಶಕ್ತಿ ತೋರಬೇಕೆಂದು ಮನವಿ ಮಾಡಿ ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರವನ್ನು ಅವರಿಗೆ ನೀಡಿ ವಿವರಿಸಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದ್ದೇನೆ ಎಂದು ದಿನೇಶ್ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು (ಮೂಂಗ್) ಬೆಳೆಗಳ ತೀವ್ರ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ ಕಾರಣ ಈ ಬಗ್ಗೆ ನಿಮ್ಮ ಗಮನಕ್ಕೆ ತಂದು ಬೆಂಬಲ ಬೆಲೆಯಲ್ಲಿ ರೈತರಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡುವ ಕುರಿತು ಈ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪತ್ರ ಬರೆದಿದ್ದಾರೆ.
ನಮ್ಮ ಲಕ್ಷಾಂತರ ರೈತರು ಜೀವನೋಪಾಯಕ್ಕಾಗಿ ಕೃಷಿ ಮಾಡಿರುವ ಬೆಳೆಗಳನ್ನು ಖರೀದಿಸುತ್ತಿರುವ ಬೆಲೆ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ ಬಹಳಷ್ಟು ಕಡಿಮೆ ಇದ್ದು, ಕೃಷಿಕರಲ್ಲಿ ವ್ಯಾಪಕ ಸಂಕಷ್ಟವನ್ನು ಸೃಷ್ಟಿಸಿದೆ. ಈ ಮುಂಗಾರು ಹಂಗಾಮಿನಲ್ಲಿ ಕರ್ನಾಟಕವು 17.94 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 4.16 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೆಸರು ಕಾಳನ್ನು ಬೆಳೆದಿದ್ದು, ರಾಜ್ಯವು 54.74 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಮೆಕ್ಕೆಜೋಳ ಮತ್ತು 1.983 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಸರು ಕಾಳಿನ ಅಂದಾಜು ಉತ್ಪಾದನೆಯನ್ನು ನಿರೀಕ್ಷಿಸುತ್ತಿದೆ. ಇದು ಸಮೃದ್ಧಿಗೆ ಒಂದು ಅವಕಾಶವಾಗಿರಬೇಕಾಗಿದ್ದರೂ, ಪ್ರಸಕ್ತ ಮಾರುಕಟ್ಟೆ ಪರಿಸ್ಥಿತಿಗಳು ಇದನ್ನು ಬಿಕ್ಕಟ್ಟಾಗಿ ಪರಿವರ್ತಿಸಿವೆ.
ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್ಗೆ ರೂ.2,400 ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.8768 ರಂತೆ ಒSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆಗಳು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್ಗೆ ರೂ.1,600-1,800 ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.5,400 ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ.
ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ, ಭಾರತ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ಕೆಳಗಿನಂತೆ, ದರ ನಿಗದಿ ಮಾಡುವಂತೆ ವಿನಂತಿ ಮಾಡಲಾಗಿದೆ.