ಶಕ್ತಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Saturday, November 22, 2025
ಮಂಗಳೂರು: ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿರುವ ರೇಷ್ಮಾ ಮೆಮೊರಿಯಲ್ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಬಬಿತ ಸೂರಜ್ ಅವರು ಶಾಲೆಯ ಮಕ್ಕಳೊಂದಿಗೆ ಸೇರಿ ದೀಪವನ್ನು ಬೆಳಗಿಸಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಬೆಳೆಯುವುದಕ್ಕೆ ಮೌಲ್ಯಗಳ ಬೇರುಗಳು ಮತ್ತು ಆಸಕ್ತಿಯ ರೆಕ್ಕೆಗಳು ಇರಬೇಕು. ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣು ಎಂಬ ಮಾತಿನಂತೆ ಚಿಕ್ಕ ವಯಸ್ಸಿನಿಂದಲೇ ಮಕ್ಕಳು ಮೌಲ್ಯಗಳನ್ನು ಬೆಳೆಸಿಕೊಳ್ಳುತ್ತಾ ಜೀವನದಲ್ಲಿ ಸದೃಢರಾಗಿ ಬೆಳಯಬೇಕು. ಮಕ್ಕಳೆಲ್ಲರೂ ತಮ್ಮ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಗುರು ಹಿರಿಯರಿಗೆ ಗೌರವವನ್ನು ನೀಡುತ್ತಾ ಸಮಾಜದಲ್ಲಿ ಇತರರಿಗೆ ಮಾದರಿಯಾಗಬೇಕು ಎಂದು ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಕೂಡಿಕೊಂಡು ಮಕ್ಕಳಿಗಾಗಿ ಹಾಡು, ನೃತ್ಯ ನಾಟಕ ಒಳಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಮಕ್ಕಳನ್ನು ರಂಜಿಸಿದರು.
ಶಿಕ್ಷಕಿ ವಿದ್ಯಾಲಕ್ಷ್ಮೀ ಸ್ವಾಗತಿಸಿದರು. ಶಿಕ್ಷಕಿ ಮರಿಯಾ ವಂದಿಸಿದರು. ಶಿಕ್ಷಕಿ ನಯನ ಅವರು ದಿನದ ಪ್ರಾಮುಖ್ಯತೆಯನ್ನು ವಾಚಿಸಿದರು.




