ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ

ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ

ಮಂಗಳೂರು: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.

ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ  ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article