ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ
Monday, November 3, 2025
ಮಂಗಳೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲ್ಗುಣಿ ನೂತನ ಕಟ್ಟಡ ಈಚೆಗೆ ಲೋಕರ್ಪಣೆಗೊಂಡಿದೆ. ಇದರ ಪ್ರಯುಕ್ತ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಅಭಿನಂದಿಸಲಾಯಿತು.
ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಎಂ.ಎನ್. ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನವನ್ನು ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಅವರು ಸ್ಮರಿಸಿ, ಸಂಘದ ಆಡಳಿತ ಮಂಡಳಿಯ ನಿರ್ದೇಶಕರೊಂದಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಕುಶಲಪ್ಪ ಗೌಡ ಹಾಗೂ ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ನಿರ್ದೇಶಕರಾದ ಆಶಾ, ರೋಹಿಣಿ ಉಪಸ್ಥಿತರಿದ್ದರು.