ನಾಳೆ ಮಂಗಳೂರು ನಗರದಲ್ಲಿ ನೀರು ಸರಬರಾಜು ಅಲಭ್ಯ
Tuesday, November 18, 2025
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆ ನ.17 ರಂದು ಬೆಳಗಿನ ಸಮಯದಲ್ಲಿ ಪಡೀಲ್ ಸಮೀಪದ ಕಣ್ಣೂರು ಬಳಿ ಹಾನಿಗೊಳಗೊಂಡಿದೆ. ಈ ಹಿನ್ನೆಲೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನ.19 ರಂದು ಬೆಳಗ್ಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ನೀರು ಸರಬರಾಜು ಇರುವುದಿಲ್ಲ.
ಬುಧವಾರ ಸಂಜೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ.
ಈ ಅವಧಿಯಲ್ಲಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು-ಫಳ್ನಿರ್, ಮುಳಿಹಿತ್ಲು, ಬೋಳಾರ, ಕಾರ್‌ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ನಗರ, ಚಿಲಿಂಬಿ, ಕೋಡಿಕಲ್, ಉರ್ವಾಸ್ಟೋರ್, ಆಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕಡ ಮುಂತಾದ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.