ರಥಬೀದಿ ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ವೃತ್ತಿ ಪರಿಚಯ ಕಾರ್ಯಾಗಾರ

ರಥಬೀದಿ ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ವೃತ್ತಿ ಪರಿಚಯ ಕಾರ್ಯಾಗಾರ


ಮಂಗಳೂರು: ‘ಚಾರ್ಟರ್ಡ್ ಅಕೌಂಟೆಂಟ್ ಒಂದು ಅತ್ಯುತ್ತಮ ವೃತ್ತಿಯಾಗಿದ್ದು, ಕಾಮರ್ಸ್ ಹಿನ್ನಲೆಯ ವಿದ್ಯಾರ್ಥಿಗಳು ನಿರಂತರ ಪ್ರಯತ್ನ ಹಾಗೂ ಪರಿಶ್ರಮದಿಂದ ಈ ಪರೀಕ್ಷೆಯಲ್ಲಿ ಯಶಸ್ವಿಯಾಗಬಹುದು’ ಎಂದು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ ಮಂಗಳೂರು ಶಾಖೆಯ ಕಾರ್ಯದರ್ಶಿ ಸಿಎ ಮಮತಾ ರಾವ್ ಹೇಳಿದರು.

ಅವರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದಸಿಎ ವೃತ್ತಿ ಪರಿಚಯ ಮತ್ತು ಪರೀಕ್ಷಾ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ಅವರು ‘ವಿದ್ಯಾರ್ಥಿಗಳು ಪದವಿ ಹಂತದ ಪ್ರಾರಂಭದಲ್ಲಿಯೇ ಸಿಎ ಯಂತಹ ಗೌರವಾನ್ವಿತ ವೃತ್ತಿಯ ಕಡೆಗೆ ಗಮನಹರಿಸಬೇಕು. ತಜ್ಞರಿಂದ ಮಾರ್ಗದರ್ಶನ ಪಡೆದು ಮುನ್ನಡೆಯಬೇಕು’ ಎಂದರು.

ಚಾರ್ಟರ್ಡ್ ಅಕೌಂಟೆಂಟ್‌ಗಳಾದ ಸುಮಂತ್ ಭಟ್ ಮತ್ತು ಪೂರ್ಣಿಮ ನಾಯಕ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಿಎ ವೃತ್ತಿಯ ಬಗ್ಗೆ ಮತ್ತು ಅದಕ್ಕೆ ಸಂಬಂಧಿಸಿದ ವಿವಿಧ ಪರೀಕ್ಷಾ ಹಂತಗಳ ಬಗ್ಗೆ ವಿವರವಾದ ಮಾಹಿತಿ ನೀಡಿ, ವಿದ್ಯಾರ್ಥಿಗಳ ಸಂದೇಹಗಳಿಗೆ ಉತ್ತರಿಸಿದರು.

ಕಾರ್ಯಕ್ರಮವನ್ನು ಸಂಘಟಿಸಿದ್ದ ಕಾಲೇಜಿನ ವೃತ್ತಿ ಮಾರ್ಗದರ್ಶನ ಕೋಶದ ಸಂಚಾಲಕಿ ಡಾ. ಮಾಲತಿ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಶರಣ್ಯ ನಿರೂಪಿಸಿ, ಪ್ರತೀಕ್ಷಾ ವಂದಿಸಿದರು. ಕಾಮರ್ಸ್ ವಿಭಾಗದ ಮುಖ್ಯಸ್ಥೆ ಸುವರ್ಣಮಾಲಿನಿ, ಐಕ್ಯೂಎಸಿ ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯ ಉಪಸ್ಥಿತರಿದ್ದರು. ಸುಮಾರು 150 ಆಸಕ್ತ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article