ಅಡಿಕೆಯಲ್ಲಿ ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ

ಅಡಿಕೆಯಲ್ಲಿ ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ

ಮಂಗಳೂರು: ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ ಗುಣಗಳನ್ನು ಹೊಂದಿವೆ ಎಂಬುದು ಸಂಶೋಧನೆಯಿಂದ ಬಯಲಾಗಿದೆ.

ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಇದು ಉಲ್ಲೇಖವಾಗಿದೆ.

ಅಧ್ಯಯನದ ಪ್ರಕಾರ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಈ ಮಹತ್ವದ ಫಲಿತಾಂಶವು, ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿವೆ 

ಕ್ಯಾಂಪ್ಕೋ ಸ್ವಾಗತ..

ಈ ವರದಿ ಜನಸಾಮಾನ್ಯರ ನಂಬಿಕೆಗೆ ವೈಜ್ಞಾನಿಕ ಸಾಕ್ಷ್ಯಾಧಾರವನ್ನು ಒದಗಿಸಿದೆ ಎಂದು ವರದಿಯನ್ನು ಸ್ವಾಗತಿಸಿರುವಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. 

ಈ ಅಧ್ಯಯನವು ವಿಶ್ವ ಆರೋಗ್ಯ ಸಂಸ್ಥೆಯು ಇತ್ತೀಚೆಗೆ ಅಡಿಕೆಯನ್ನು ಕ್ಯಾನ್ಸರ್ಕಾರಕ ಎಂದು ವರ್ಗೀಕರಿಸಿರುವುದು ಕಪೋಲ ಕಲ್ಪಿತ ಎಂಬುದಕ್ಕೆ ಸಾಕ್ಷಿಯಾಗಿದೆ. ಕ್ಯಾಂಪ್ಕೊದ ಪ್ರತಿಪಾದನೆಗೆ ಪ್ರಬಲವಾದ ಪುರಾವೆ ಲಭಿಸಿದಂತಾಗಿದೆ. ಪ್ರತಿಷ್ಠಿತ ಸಂಸ್ಥೆಗಳ ಈ ರೀತಿಯ ಸಂಶೋಧನೆ ಆಧಾರಿತ ನಿರ್ಧಾರಗಳು ಅಡಿಕೆಯ ಕುರಿತು ಸಮತೋಲನದ ಮತ್ತು ವೈಜ್ಞಾನಿಕ ದೃಷ್ಟಿಕೋನವನ್ನು ಪುಷ್ಟಿಕರಿಸಲು ಸಹಾಯ ಮಾಡುತ್ತವೆ ಎಂದು ತಿಳಿಸಿದ್ದಾರೆ. 

ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯ ಮತ್ತಿತರ ಪ್ರತಿಷ್ಠಿತ ವೈಜ್ಞಾನಿಕ ಸಂಸ್ಥೆಗಳ ಅಧ್ಯಯನಗಳು ಕೂಡ ಅಡಿಕೆಯು ಕ್ಯಾನ್ಸರ್ಕಾರಕವಲ್ಲ. ಬದಲಾಗಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ ಎಂಬುದನ್ನು ಸಾಬೀತು ಪಡಿಸಿವೆ. ಇದರಿಂದ ಬೆಳೆಗೆ ಇರುವ ಸಾಂಸ್ಕೃತಿಕ ಮತ್ತು ಪರಂಪರಾತ್ಮಕ ಮಹತ್ವ ರುಜುವಾತು ಆಗಿದೆ. ಈ ರೀತಿಯ ವೈಜ್ಞಾನಿಕ ದೃಢೀಕರಣಗಳು ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಉತ್ಪನ್ನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದವರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article