ಮದ್ಯದಂಗಡಿ ಮುಚ್ಚಲು ಆದೇಶ
Monday, November 24, 2025
ಮಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿ.2 ರ ತನಕ ನಡೆಯಲಿದ್ದು, ನ.25 ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ 26 ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು 50 ರಿಂದ 60 ಸಾವಿರ ಭಕ್ತಾಧಿಗಳು ಸೇರುವ ನಿರೀಕ್ಷೆ ಇದೆ.
ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನ.25 ರಂದು ಬೆಳಗ್ಗೆ 6 ಗಂಟೆಯಿಂದ 26 ರ ರಾತ್ರಿ 12 ಗಂಟೆಯ ತನಕ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.