ಟ್ರಾನ್ಸ್‌ಜೆಂಡರ್ ಸಮೀಕ್ಷೆ: ಕಡ್ಡಾಯವಾಗಿ ಮಾಹಿತಿ ಒದಗಿಸಲು ಸೂಚನೆ

ಟ್ರಾನ್ಸ್‌ಜೆಂಡರ್ ಸಮೀಕ್ಷೆ: ಕಡ್ಡಾಯವಾಗಿ ಮಾಹಿತಿ ಒದಗಿಸಲು ಸೂಚನೆ

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್‌ಜೆಂಡರ್) ಸಮೀಕ್ಷೆಗೆ ಈಗಾಗಲೇ ಚಾಲನೆ ನೀಡಿದ್ದು, ನ.21 ರವರೆಗೆ (ರಜಾದಿನ ಹೊರತುಪಡಿಸಿ)ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ವೆನ್‌ಲಾಕ್ ಆಸ್ಪತ್ರೆ, ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ, ಪುತ್ತೂರು/ಬೆಳ್ತಂಗಡಿ/ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿದೆ.

ಟ್ರಾನ್ಸ್‌ಜೆಂಡರ್ಸ್‌ರವರ ಜನಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿಯು ಅತೀ ಅಗತ್ಯವಾಗಿರುವುದರಿಂದ ಸಮೀಕ್ಷೆಯು ಪೂರ್ಣಗೊಳ್ಳಲು ಕೇವಲ 9 ದಿನ ಬಾಕಿ ಉಳಿದಿರುವುದರಿಂದ ಸಮೀಕ್ಷೆಗೆ ಒಳಗಾಗದ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್‌ಜೆಂಡರ್) ಸಮುದಾಯದ ವ್ಯಕ್ತಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಹಾಜರಾಗಿ ಮಾಹಿತಿಗಳನ್ನು ಒದಗಿಸಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ 9480155501 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article