ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ ಆರಂಭ
ಶಾಸಕ ಉಮಾನಾಥ್ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಸಿಂಡಿಕೇಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಸೆನೆಟ್ ಸದಸ್ಯೆ ಪ್ರೊ.ವೈಶಾಲಿ ಶ್ರೀಜಿತ್, ಕ್ರೀಡಾಕೂಟದ ವೀಕ್ಷಕರಾದ ಡಾ.ಅನಿಲ್ ಜೋಸೆಫ್, ಡಾ.ಜಯಕುಮಾರ್, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.
ಜೇಷ್ಯಾ ಡಿಸೋಜ, ಉಷಾರಾಣಿ ಜಿ ಎಚ್, ವಿಶಾಲ್ ವಿ ಸಾಲ್ಯಾನ್, ಕ್ಯಾಥರಿನ್ ತೋಮಸ್, ಮಹೇಂದರ್ ಚೌಧರಿ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದರು.
ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಶೀಲ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.
ರಾಷ್ಟ್ರ ನಷಾ ಮುಕ್ತ ಭಾರತ ಅಭಿಯಾನಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಕ್ರಿಯ ಬೆಂಬಲ ನೀಡುತ್ತಿದೆ. ಈ ಹಿನ್ನಲೆಯಲ್ಲಿ ಈ ಕ್ರೀಡಾಕೂಟದ ಪಥಸಂಚಲನದಲ್ಲಿ ಆಳ್ವಾಸ್ ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ವಿಶೇಷ ಪ್ಲಕಾರ್ಡ್ಗಳು ಮತ್ತು ಬ್ಯಾನರ್‌ಗಳು ಹಿಡಿದು ನಷಾ ಮುಕ್ತ ಭಾರತ ಸಂದೇಶವನ್ನು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ತಲುಪಿಸಿದರು.
ಆಳ್ವಾಸ್ ಮುನ್ನಡೆ
ಮೊದಲ ದಿನದ ಅಂತ್ಯಕ್ಕೆ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ಸ್ ಕಾಲೇಜಿನ ವಿದ್ಯಾರ್ಥಿಗಳು 14 ಪಾಯಿಂಟ್‌ಗಳೊAದಿಗೆ ಮುನ್ನಡೆ ಕಾಪಾಡಿಕೊಂಡರೆ, ಸೈಂಟ್ ಅಥೆನಾ ಕಾಲೇಜು 13 ಪಾಯಿಂಟ್‌ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಮೂರು ದಿನಗಳ ಕ್ರೀಡಾಕೂಟದಲ್ಲಿ ರಾಜ್ಯದ 127 ಕಾಲೇಜುಗಳಿಂದ 924 ಕ್ರೀಡಾಪಟುಗಳು ಪಾಲ್ಗೊಂಡರು.

