ಡಿ.9: ಲೀಲಾ ಸಂಸ್ಮರಣೆ, ಪದ್ಯಾಣ ಶಂಕರ ನಾರಾಯಣ ಭಟ್ ಅವರಿಗೆ ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ ಪ್ರದಾನ
ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ವಿವಿಧ ಯಕ್ಷಗಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬೆಳಗ್ಗೆ ಬೈಪಾಡಿತ್ತಾಯರ ಶಿಷ್ಯರು ಮತ್ತು ಅತಿಥಿ ಕಲಾವಿದರಿಂದ ಲೀಲಾ ಅವರಿಗೆ ಯಕ್ಷಗಾನಾರ್ಚನೆ ನಡೆಯಲಿದೆ. ಮಧ್ಯಾಹ್ನ 3.15ರಿಂದ ಬೈಪಾಡಿತ್ತಾಯ ಶಿಷ್ಯವೃಂದದಿಂದ ಚೆಂಡೆಗಳ ಜುಗಲ್ಬಂದಿ 'ಅಬ್ಬರತಾಳ' ಪ್ರದರ್ಶನ ಇರಲಿದೆ. ಸಂಜೆ ಲೀಲಾ ಬೈಪಾಡಿತ್ತಾಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ, ಸಂಪೂರ್ಣ ಮಹಿಳೆಯರೇ ಇರುವ ಶ್ರೀಶ ಕಲಿಕಾ ಕೇಂದ್ರ, ತಲಕಳ ಕಲಾವಿದರಿಂದ 'ದಕ್ಷ ಯಜ್ಞ' ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಹಿರಿಯ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಆಲಂಗಾರು ದೇವಸ್ಥಾನದ ಪ್ರಧಾನ ಆರ್ಚಕರಾದ ವೇದಮೂರ್ತಿ ಈಶ್ವರ ಭಟ್ ಅವರು ದೀಪಪ್ರಜ್ವಲನೆ ಮಾಡಲಿದ್ದು, ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ. ಹಿರಿಯ ವಿದ್ವಾಂಸ ಪ್ರೊ.ಎಂ.ಎಲ್.ಸಾಮಗರು ಅವರು ಲೀಲಾ ಬೈಪಾಡಿತ್ತಾಯರ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಪ್ರಸಿದ್ಧ ಕಲಾವಿದೆ, ವಾಗಿ ವಾಸುದೇವ ರಂಗಾಭಟ್ ಮಧೂರು ಅವರು ಪುರಸ್ಕೃತ ಪದ್ಯಾಣ ಶಂಕರನಾರಾಯಣ ಭಟ್ ಅವರನ್ನು ಅಭಿನಂದಿಸಲಿದ್ದಾರೆ. ಉದ್ಯಮಿ ಶ್ರೀಪತಿ ಭಟ್, ಮೂಡುಬಿದಿರೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
