ಡಿಜಿಟಲ್ ಯುಗದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ: ವಿಶೇಷ ಉಪನ್ಯಾಸ ಕಾರ್ಯಕ್ರಮ
ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಮೋಹನದಾಸ್ ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, “ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದರೂ, ಮಾನವ ಹಕ್ಕುಗಳ ಉಲ್ಲಂಘನೆ ಹೊಸ ರೂಪದಲ್ಲಿ ಹೆಚ್ಚುತ್ತಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ನಿರ್ಬಂಧ, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಆನ್ಲ್ಲೈನ್ ಹಿಂಸೆ, ಆರ್ಥಿಕ ವಂಚನೆಗಳು ಮಾನವ ಹಕ್ಕುಗಳ ಮೇಲೆ ನೇರ ದಾಳಿ ಮಾಡುತ್ತಿವೆ. ಈ ಹಿನ್ನಲೆಯಲ್ಲಿ ಡಿಜಿಟಲ್ ಸಾಕ್ಷರತೆ ಹೆಚ್ಚಿಸುವುದು ಮತ್ತು ಪ್ರತಿಯೊಬ್ಬರು ನೈತಿಕವಾಗಿ ಹಾಗೂ ಜವಾಬ್ದಾರಿಯುತವಾಗಿ ತಂತ್ರಜ್ಞಾನ ಬಳಸುವುದು ಅತ್ಯಂತ ಅಗತ್ಯ, ಡಿಜಿಟಲ್ ಜಗತ್ತಿನಲ್ಲಿ ಮಾನವ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯ” ಎಂದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಮಾತನಾಡಿ, ಸಮಾಜದಲ್ಲಿ ಉತ್ತಮ ಉದ್ಯೋಗ ಪಡೆಯಲು ಡಿಜಿಟಲ್ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಾವಶ್ಯಕ, ಮೊಬೈಲ್ ಬಳಕೆಯ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಭಂಡಾರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿನ ನಿವೃತ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯಪ್ರಕಾಶ್ ಮಾವಿನಕುಳಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೆಫ್ಟಿನೆಂಟ್ ವಿಜಯಲಕ್ಷ್ಮೀ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ವಿದ್ಯಾರ್ಥಿ ನಾಯಕಿ ಸಾಕ್ಷಿ ಶೆಟ್ಟಿ, ಮಾನವ ಹಕ್ಕುಗಳ ಸಂಘದ ಕಾರ್ಯದರ್ಶಿ ಫ್ಲೋರಿನ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ರಕ್ಷಿತಾ ಸ್ವಾಗತಿಸಿದರು. ಸಾಕ್ಷಿ ಕಾಯ೯ಕ್ರಮ ನಿರೂಪಿಸಿದರು. ಫ್ಲೋರಿನ್ ವಂದಿಸಿದರು.