ಇರ್ಶಾದ್ ಮೂಡುಬಿದಿರೆಯವರಿಗೆ `ಸಾಧಕ ರತ್ನ' ಪ್ರಶಸ್ತಿ ಪ್ರದಾನ

ಇರ್ಶಾದ್ ಮೂಡುಬಿದಿರೆಯವರಿಗೆ `ಸಾಧಕ ರತ್ನ' ಪ್ರಶಸ್ತಿ ಪ್ರದಾನ


ಮೂಡುಬಿದಿರೆ: ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ಬರಹಗಾರ ಇರ್ಶಾದ್ ಮೂಡುಬಿದಿರೆ ಅವರಿಗೆ ದುಬೈ ಕರ್ನಾಟಕ ಸಂಘದ ವತಿಯಿಂದ ಪ್ರತಿಷ್ಠಿತ `ಸಾಧಕ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. 

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಕನ್ನಡ ಚಿತ್ರರಂಗದ ನಟಿ ಜಯಮಾಲಾ, ಉದ್ಯಮಿ ಡಾ. ಬಿ.ಆರ್. ಶೆಟ್ಟಿ, ವಕ್ವಾಡಿ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article