ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪಧೆ೯ ಉದ್ಘಾಟನೆ
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಮಾತನಾಡಿ“ವಿಜ್ಞಾನವೆಂಬ ವಿಶೇಷವಾದ ಜ್ಞಾನವನ್ನು ವೃದ್ಧಿಸಿಕೊಂಡು, ಹೊಸ ಹೊಸ ಆವಿಷ್ಕಾರಗಳೊಂದಿಗೆ ಸದೃಢ ದೇಶಕಟ್ಟುವ ಸತ್ಪ್ರಜೆಗಳಾಗಿ” ಎಂಬ ಶುಭಾಷಯಗಳನ್ನಿತ್ತರು.
ವಿಜ್ಞಾನ ಮಾದರಿತಯಾರಿ ಹಾಗೂ ಪ್ರದರ್ಶನದ ಈ ಸ್ಪರ್ಧೆಯಲ್ಲಿ ಗುಂಪು ವಿಭಾಗದಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳಾದ ನಿಹಾರ್ ಹಾಗೂ ಶಾಶ್ವತ್ (ಪ್ರಥಮ), ಗಗನದೀಪ ಹಾಗೂ ಚಿನ್ಮಯಿ (ದ್ವಿತೀಯ) ಮತ್ತುಅಭಿನೀತ್ ಹಾಗೂ ಪ್ರಣವ್ (ತೃತೀಯ) ಬಹುಮಾನ ಪಡೆದರೆ, ವೈಯುಕ್ತಿಕ ವಿಭಾಗದಲ್ಲಿ ಸಂತಥೋಮಸ್‌ಆಂಗ್ಲ ಮಾಧ್ಯಮ ಶಾಲೆ ಇಲ್ಲಿನ ವಿದ್ಯಾರ್ಥಿಯಶಸ್ (ಪ್ರಥಮ) ಮತ್ತು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೈತ್ರಿ (ದ್ವಿತೀಯ) ಹಾಗೂ ತರುಣ್ (ತೃತೀಯ) ಬಹುಮಾನವನ್ನು ಗಳಿಸುವ ಮೂಲಕ ಈ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಶಾಲೆ ಪಾರಮ್ಯ ಮೆರೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನ ಶಿಕ್ಷಕರಾದ ಪಶುಪತಿ ಶಾಸ್ತ್ರಿ , ಮೂಡುಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕರಾಗಿರುವ ಚೈತ್ರಾ ಹಾಗೂ ಕುಮಾರಿ ಆಶ್ವಿತಾ ತೀರ್ಪುಗಾರರಾಗಿ ಸಹಕರಿಸಿದರು. ಉಪ ಮುಖ್ಯಶಿಕ್ಷಕರಾದ ಜಯಶೀಲ, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಟೇಶ್ ಭಟ್ ಉಪಸ್ಥಿತರಿದ್ದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ, ನಂತರ ವಂದನಾರ್ಪಣೆಗೈದರು. ವಿಜ್ಞಾನ ಶಿಕ್ಷಕರಾದ ಪ್ರಜ್ವಲ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

