ಭಾರತ ಸಂವಿಧಾನ ಜಾಗೃತಿ ಜಾಥಾ
Wednesday, November 26, 2025
ಮೂಡುಬಿದಿರೆ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಸಮಾಜ ಕಲ್ಯಾಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಭಾರತ ಸಂವಿಧಾನ ಜಾಗೃತಿ ಜಾಥಾವು ಬುಧವಾರ ನಡೆಯಿತು.
ಆಡಳಿತ ಸೌಧದ ಮುಂಭಾಗದಿಂದ ಹೊರಟ ಜಾಗೃತಿ ಜಾಥಾಕ್ಕೆ ತಾಲೂಕು ತಹಸೀಲ್ದಾರ್ ಶ್ರೀಧರ ಎಸ್. ಮುಂದಲಮನಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ಸಮಿತಿ ಸದಸ್ಯ ರಾಜೇಶ್ ಕಡಲಕೆರೆ, ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಕುಸುಮಾಧರ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನವೀನ್ ಪುತ್ರನ್, ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಪಶು ವೈದ್ಯಾಧಿಕಾರಿ ಪುರಸಭಾ ಪರಿಸರ ಅಭಿಯಂತರೆ ಶಿಲ್ಪಾ, ಪಶು ಇಲಾಖೆಯ ಸುಭಾಶ್ಚಂದ್ರ ಕಮ್ಮಾರ, ಕಂದಾಯ ಅಧಿಕಾರಿಗಳು, ಉಪಸ್ಥಿತರಿದ್ದರು.
ಜಾಥಾವು ತಾಲೂಕು ಕಛೇರಿಯಿಂದ ಹೊರಟು ಮೂಡುಬಿದಿರೆ ಪೇಟೆಯ ಮುಖ್ಯ ರಸ್ತೆಯಲ್ಲಿ ಸಾಗಿತು.
ಭಾರತ ಮಾತೆ ಹಾಗೂ ಅಂಬೇಡ್ಕರ್ ಅವರ ವೇಷ ಧರಿಸಿದ ವಿದ್ಯಾಥಿ೯ಗಳನ್ನು ತೆರೆದ ಜೀಪಿನಲ್ಲಿ ಸಾಗಿ ಬಂದರು. ವಿವಿಧ ಶಾಲೆಯ ವಿದ್ಯಾಥಿ೯ಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.




