ಶ್ರೀ ಮಹಾವೀರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಮ್ಮಿಲನ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್ ಬಿ. ಅವರು ಮಾತನಾಡಿ ಕಾಲೇಜಿನ ಮುಂದಿನ ಯೋಜನೆಗಳನ್ನು ತಿಳಿಸುತ್ತಾ “ಕಳೆದ ಅರವತ್ತು ವರ್ಷಗಳಲ್ಲಿ ಈ ಕಾಲೇಜಿನಲ್ಲಿ ಹಲವು ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ಎಲ್ಲರ ಸಹಕಾರದಿಂದ ವಜ್ರಮಹೋತ್ಸವವನ್ನು ಸ್ಮರಣೀಯ ಕಾರ್ಯಕ್ರಮವನ್ನಾಗಿ ಮಾಡಬಹುದು” ಎಂದರು.
ಹಳೆ ವಿದ್ಯಾರ್ಥಿಗಳು ವಜ್ರಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಪ್ರಗತಿಯ ದೃಷ್ಟಿಯಿಂದ ನಡೆಸಲಾಗುವ ಕಾರ್ಯಕ್ರಮಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಬೇಕು. ಇದರಿಂದ ಹಳೆವಿದ್ಯಾರ್ಥಿಗಳೊಂದಿಗಿನ ಕಾಲೇಜಿನ ಬಾಂಧವ್ಯ ಇನ್ನಷ್ಟು ವೃದ್ಧಿಯಾಗುತ್ತದೆ ಎಂಬ ಅಭಿಪ್ರಾಯ ಹಳೆವಿದ್ಯಾರ್ಥಿಗಳಿಂದ ವ್ಯಕ್ತವಾಯಿತು.
ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ, ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ ಕಾಲೇಜು ತನ್ನನ್ನು ಅತ್ಯುತ್ತಮ ವ್ಯಕ್ತಿಯನ್ನಾಗಿ ಬೆಳೆಸಿದ್ದನ್ನು ಸ್ಮರಿಸಿದರು.
ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದರು. ಪಿಯು ಕಾಲೇಜು ಪ್ರಾಂಶುಪಾಲೆ ಲೆ.ವಿಜಯಲಕ್ಷ್ಮೀ ಬಿ. ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿನಿ ಚಂದನಾ ಕೆ. ಎಸ್. ಕಾರ್ಯಕ್ರಮ ನಿರೂಪಿಸಿದರು.ನಿವೃತ್ತ ಪ್ರಾಂಶುಪಾಲ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಎಂ. ರಮೇಶ್ ಭಟ್ ಎಲ್ಲರನ್ನೂ ವಂದಿಸಿದರು.
