ಶ್ರೀ ಮಹಾವೀರ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ಎನ್.ಸಿ.ಸಿ. , ಯುವ ರೆಡ್ ಕ್ರಾಸ್ , ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಭಂಡಾರಿ ಅವರು ಭಾಗವಹಿಸಿ ಮಾತನಾಡಿದರು.
ಅವರು, "ಸಂವಿಧಾನದ ಮಹತ್ವವನ್ನು ಅರಿತುಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗಿವೆ. ಯುವಜನರು ದೇಶದ ಆಡಳಿತದ ಬಗ್ಗೆ ಪರಿಜ್ಞಾನವನ್ನು ಹೊಂದಬೇಕು, ಅದಕ್ಕಾಗಿ ಅವರಿಗೆ ಸಂವಿಧಾನದ ಕುರಿತು ಅರಿವಿರಬೇಕು. ಭಾರತದ ಸಂವಿಧಾನವು ಸಂಘರ್ಷ ಮತ್ತು ಹೋರಾಟಗಳ ಫಲವಾಗಿ ಲಭಿಸಿದೆ. ಸಂವಿಧಾನವೇ ನಮ್ಮ ಧರ್ಮ ಎಂದು ನಂಬಿ, ಮಾನವೀಯತೆ ಮತ್ತು ಸೌಹಾರ್ದತೆಯೊಂದಿಗೆ ಬದುಕಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿ. ಸಂವಿಧಾನದ ಆಶಯಗಳು ಇಂದಿನ ವಿದ್ಯಾರ್ಥಿಗಳು ಮತ್ತು ಯುವಜನರಿಂದ ಸಾಕಾರಗೊಳ್ಳಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅವರು ಮಾತನಾಡಿ, ಭಾರತದ ಸಂವಿಧಾನವು ವಿಶ್ವದಲ್ಲಿಯೇ ವಿಶಿಷ್ಟವಾದ ಸಂವಿಧಾನ. ಸಂವಿಧಾನ ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಆದರೆ, ನಾವು ನಮ್ಮ ಕರ್ತವ್ಯಗಳನ್ನು ಎಂದಿಗೂ ಮರೆಯಬಾರದು ಎಂದರು.
ಎನ್.ಎಸ್.ಎಸ್. ಅಧಿಕಾರಿಯಾದ ಶಾರದಾ ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೆಫ್ಟಿನೆಂಟ್ ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಯುವ ರೆಡ್ ಕ್ರಾಸ್ ಅಧಿಕಾರಿ ಶ್ರೀಗೌರಿ, ಎನ್.ಎಸ್.ಎಸ್. ಅಧಿಕಾರಿಗಳಾದ ಶಾರದಾ ಮತ್ತು ರಶಿತಾ, ಹಾಗೂ ರೇಂಜರ್ಸ್ ಅಧಿಕಾರಿ ಅರುಣಾ ಅವರು ಉಪಸ್ಥಿತರಿದ್ದರು.
ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಪ್ರಣಮ್ಯ ನಿರೂಪಿಸಿದರು.