ಕನಕರ ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಿ: ಡಾ. ಎಸ್ಸೆನ್ವಿ

ಕನಕರ ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಿ: ಡಾ. ಎಸ್ಸೆನ್ವಿ


ಮೂಡುಬಿದಿರೆ: ಕಲ್ಲಬೆಟ್ಟುವನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಸಂತ ಕನಕದಾಸರ ಜಯಂತಿಯನ್ನು ಶನಿವಾರ ಆಚರಿಸಲಾಯಿತು.

 ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, 16ನೇ ಶತಮಾನದಲ್ಲಿ ನಮ್ಮ ಸಮಾಜದಲ್ಲಿದ್ದ ಅಸಮಾನತೆ ಮತ್ತು ಜಾತಿ  ತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದವರು  ಸಂತ ಕನಕದಾಸರು. ತಮ್ಮ ಕಾವ್ಯ  ಮತ್ತು ಕೀರ್ತನೆಗಳ ಮೂಲಕ ಹರಿದಾಸ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಲ್ಲದೇ ಸಮಾಜದ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಿ ಸಮ ಸಮಾಜದ ನಿರ್ಮಾಣ ಮಾಡುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಎಂದು ಹೇಳಿದರು. 

ಕನಕದಾಸರ ತತ್ವ ಚಿಂತನೆ ಮತ್ತು ಸಾಮಾಜಿಕ ಪ್ರಜ್ಞೆಯನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಈ ಸಮಾಜದಲ್ಲಿ  ಜೀವನ ನಡೆಸಬೇಕು ಎಂದು ಹೇಳಿದರು.  

ದಾರ್ಶನಿಕ ವ್ಯಕ್ತಿಗಳ ಜಯಂತಿಯನ್ನು ಆಚರಿಸುವುದರೊಂದಿಗೆ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಸಾಧನೆಯನ್ನು ಎಲ್ಲರೂ ತಿಳಿದುಕೊಳ್ಳುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮೆಹಬೂಬ್ ಬಾಷಾ, ಚಂದ್ರಶೇಖರ ರಾಜೇ ಅರಸ್, ಯೋಗೇಶ್ ಬೆಡೆಕರ್,  ಸುಭಾಷ್ ಝಾ, ಡಾ. ಶರತ್ ಗೋರೆ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article