ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕಲ್ಲಮುಂಡ್ಕೂರು ಸವೋ೯ದಯ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕಲ್ಲಮುಂಡ್ಕೂರು ಸವೋ೯ದಯ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ


ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್  ಮೂಡುಬಿದಿರೆ ವತಿಯಿಂದ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ಶುಕ್ರವಾರ ಟ್ಯೂಷನ್ ತರಗತಿಯನ್ನು ಆರಂಭಿಸಲಾಯಿತು.

ಶ್ರೀ ಕ್ಷೇ. ಧ. ಗ್ರಾ ಯೋಜನೆಯ ತಾಲೂಕಿನ ಯೋಜನಾಧಿಕಾರಿ  ಧನಂಜಯ ದೀಪ ಪ್ರಜ್ವಲನೆ ಮಾಡುವ ಮೂಲಕ  ಉದ್ಘಾಟಿಸಿ ವಿಶೇಷ ತರಗತಿ ಯ ಉದ್ದೇಶ,  ಕಾರ್ಯಕ್ರಮದ ಅನುಷ್ಠಾನದ ಬಗ್ಗೆ  ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ   ಗ್ರಾಮಭಿವೃದ್ಧಿ ಯೋಜನೆ ಯಲ್ಲಿ ಇರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ ಅವರು ಮಕ್ಕಳ ದಿನಾಚರಣೆಯಂದು ಟ್ಯೂಷನ್ ಕ್ಲಾಸ್ ನ್ನು ಉದ್ಘಾಟನೆ ಮಾಡಿದ್ದು ಈ ವರ್ಷ 100% ಫಲಿತಾಂಶ ಬರಲಿ ಎಂದು ಶುಭ ಹಾರೈಸಿದರು.

ಶಾಲೆಯ ಮುಖ್ಯ ಶಿಕ್ಷಕ ಶಂಕರ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ನೀಡಿದ ಟ್ಯೂಷನ್ ಕ್ಲಾಸ್ ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ  ಪ್ರಯೋಜನವಾಗಲಿದೆ  ಎಂದರು. 

 ಶಾಲಾಭಿವೃದ್ಧಿ ಸಮಿತಿಯ ಹರೀಶ್, ಹಿರಿಯ ಶಿಕ್ಷಕ  ಸುಧಾಕರ್, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಜ್ಞಾನ ವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಉಪಸ್ಥಿತರಿದ್ದರು. 

ಶಿಕ್ಷಕಿ  ಸಂಗೀತ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ  ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article