ಕಾಂಗ್ರೆಸ್ ನಿಂದ ವಾಲ್ಪಾಡಿಯಲ್ಲಿ "ನಮ್ಮ ನಡೆ ಹಳ್ಳಿ ಕಡೆ" ಅಭಿಯಾನ
Thursday, November 27, 2025
ಮೂಡುಬಿದಿರೆ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ವಿನೂತನ ಕಾರ್ಯಕ್ರಮ 'ನಮ್ಮ ನಡೆ ಹಳ್ಳಿ ಕಡೆ' ಅಭಿಯಾನವು ಮೂಡುಬಿದಿರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ಗುರುವಾರ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.
ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿರ್ದೇಶನದ ಮೇರೆಗೆ, ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸರ್ಕಾರದ ಮಹತ್ವದ ಯೋಜನೆಗಳು ಮತ್ತು ಸಾಧನೆಗಳ ಕುರಿತು ಗ್ರಾಮೀಣ ಪ್ರದೇಶದ ಜನರಿಗೆ ನೇರವಾಗಿ ಮಾಹಿತಿ ನೀಡಲಾಯಿತು.
ಬೂತ್ ಅಧ್ಯಕ್ಷರಾದ ಸುಕುಮಾರ್ ಜೈನ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

