ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ


ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವನ್ನು ಆಚರಿಸಲಾಯಿತು. 

ಎಸ್‌ಡಿಎಮ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಡೀನ್ ಡಾ. ಗೀತಾ ಬಿ.ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ದಿನಾಚರಣೆಯು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ರೋಗ ನಿವಾರಣೆ ಮತ್ತು ಚಿಕಿತ್ಸೆಯ ನೆಲೆಯಲ್ಲಿ, ಸಮಾಜಕ್ಕೆ ನೈಜ ಪರಿಹಾರ ನೀಡುವಂತಾಗಬೇಕು. ಪ್ರಕೃತಿ ಚಿಕಿತ್ಸೆಯ ವೈಜ್ಞಾನಿಕ ತತ್ವಗಳನ್ನು ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸುವ ಜವಾಬ್ದಾರಿ ನಾವೆಲ್ಲದ್ದಾಗಿದೆ. ಅಲ್ಲದೆ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ದೃಢಪಡಿಸಲು ವೈಜ್ಞಾನಿಕ ದಾಖಲೆ ಸಂಗ್ರಹಣೆ ಅತ್ಯಾವಶ್ಯಕ ಎಂದರು.

ಆಳ್ವಾ ಫಾರ್ಮಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗ್ರೀಷ್ಮ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿ, ಪ್ರಕೃತಿ ಚಿಕಿತ್ಸಾ ವಿದ್ಯಾರ್ಥಿಗಳು ಮತ್ತು ವೈದ್ಯರು ಆತ್ಮವಿಶ್ವಾಸ, ಸೇವಾಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. 

ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಉಪಸ್ಥಿತರಿದ್ದರು. 

ವಿದ್ಯಾರ್ಥಿನಿ ಫಿದಾ ಅಂಜು ನಿರೂಪಿಸಿ, ಡಾ. ಆಕಾಶ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article