ಕಾರು-ರಿಕ್ಷಾ ನಡುವೆ ಅಪಘಾತ: ಬಾಲಕಿ ದುರ್ಮರಣ
Saturday, November 1, 2025
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ.
ಪುತ್ತೂರುನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ತೀರಾ ವಿರುದ್ಧ ದಿಕ್ಕಿನಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ರಿಕ್ಷಾ ಚಾಲಕ ಹನೀಫ್ ಬನ್ನೂರ್ ಅವರ ಆರು ವರ್ಷದ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಇತರ ಐದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.