ಯುವಶಕ್ತಿ ‘ಏಕತಾ ಮನೋಭಾವ’ದಿಂದ ಒಂದಾಗಬೇಕು: ಕ್ಯಾ.ಚೌಟ
ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಬದುಕು ಮತ್ತು ವ್ಯಕ್ತಿತ್ವ ಇಂದಿನ ಯುವ ಜನತೆಗೆ ಪ್ರೇರಣೆಯಾಗಬೇಕು. ನಶೆ ಮುಕ್ತ ಹಾಗೂ ಅತ್ಮನಿರ್ಭರ ಭಾರತ ನಿರ್ಮಾಣಕ್ಕಾಗಿ ಆತ್ಮಪೂರ್ವಕ ಪ್ರತಿಜ್ಞೆ ಮಾಡಬೇಕು. ಆ ಮೂಲಕ ರಾಷ್ಟ್ರನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ನಟರಾಜ ವೇದಿಕೆಯಲ್ಲಿ ಸಮಾರೋಪ ಸಮಾರಂಭವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಏಕತಾ ನಡಿಗೆಯ ಸಂಯೋಜಕರಾದ ಅರುಣ್ ಶೇಟ್, ನಂದನ್ ಮಲ್ಯ, ದಿನೇಶ್ ಅಮ್ಮೂರು, ವಿವೇಕಾನಂದ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಅರುಣ್ ಪ್ರಕಾಶ್, ಫಿಲೋಮಿನಾ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಚಂದ್ರಶೇಖರ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್, ಮೈ ಭಾರತ್ ಆಡಳಿತಾಧಿಕಾರಿ ಜಗದೀಶ್, ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಧಿಕಾರಿ ಸುನಿತಾ, ಉದ್ಯಮಿ ಸೀತಾರಾಮ ರೈ ಕೆದಂಬಾಡಿ ಗುತ್ತು, ಬಿಜೆಪಿ ಮುಖಂಡರಾದ ಯುವರಾಜ ಪೆರಿಯತ್ತೋಡಿ, ಸಂತೋಷ್ ರೈ ಕೈಕಾರ, ವಿರೂಪಾಕ್ಷ ಭಟ್, ನಾಗೇಶ್ ಟಿ.ಎಸ್., ಸಹಿತ ವಿವಿಧ ಶಾಲೆ, ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್ ಕ್ರಾಸ್, ಸ್ಕಿಟ್ ಮತ್ತು ಗೈಡ್ಸ್,ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನೆಹರು ನಗರದ ವಿವೇಕಾನಂದ ಕಾಲೇಜು ಬಳಿಯ ವಿವೇಕಾನಂದರ ಪ್ರತಿಮೆ ಬಳಿಯಿಂದ ಹೊರಟ ಏಕತಾ ನಡಿಗೆ ನೆಹರು ನಗರ, ಮಂಜಲ್ಪಡು, ಬೊಳುವಾರು, ಮುಖ್ಯರಸ್ತೆಯಾಗಿ ಮೂಲಕ ಸಾಗಿ ಪ್ರಧಾನ ಅಂಚೆ ಕಚೇರಿ ಮುಂಭಾಗದಿಂದಾಗಿ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ನಟರಾಜ ವೇದಿಕೆಯಲ್ಲಿ ಸಂಪನ್ನಗೊಂಡಿತು.
ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಟಿ.ಕೆ. ಸ್ವಾಗತಿಸಿದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಂಯೋಜಕ ಶ್ರೀಕಾಂತ್ ಪೂಜಾರಿ ಬಿರಾವು ಕಾರ್ಯಕ್ರಮ ನಿರೂಪಿಸಿದರು.
ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಈ ಏಕತಾ ಪಾದಯಾತ್ರೆ ನಡೆಯಿತು.
