ನ್ಯಾಯಾಲಯಕ್ಕೆ ನಕಲಿ ಆರ್‌ಟಿಸಿ ನೀಡಿ ವಂಚನೆ
Saturday, November 8, 2025
ಪುತ್ತೂರು: ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿ ಎಂದು ನಂಬಿಸಿ, ದ.ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಅ.ಕ್ರ 84/2025 ಕಲಂ 417, 419, 467, 468, 471 ಐ.ಪಿ.ಸಿ ಅಡಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚಿಸಿದ ಆರೋಪಿ ಅಬ್ದುಲ್ ಹಾಶೀಮ್ (34) ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ತನ್ನನ್ನು ಫಿರ್ಯಾದಿದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸಿದ್ದಲ್ಲದೆ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿ ಅದಕ್ಕೆ ಸಹಿ ಪೋರ್ಜರಿ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.