ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿ ಮನೀಶ್ ಬಿಪಿ ಮನಾಲಿ ಸಾಹಸ ಶಿಬಿರಕ್ಕೆ ಆಯ್ಕೆ
Monday, November 3, 2025
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವಿದ್ಯಾರ್ಥಿ ಮನೀಶ್ ಬಿ.ಪಿ. (ದ್ವಿತೀಯ ವಿಜ್ಞಾನ ವಿಭಾಗ) ನ.5 ರಿಂದ 14 ರವರೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆಯಲಿರುವ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಅಂಡ್ ಅಲೈಡ್ ಸ್ಪೋರ್ಟ್ಸ್ ಆಯೋಜಿಸಿರುವ 14ನೇ ರಾಷ್ಟ್ರೀಯ ಸಾಹಸ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನಲ್ಲಿ ಎರಡು ಎನ್‌ಎಸ್‌ಎಸ್ ಘಟಕಗಳಿದ್ದು ಒಟ್ಟು 250 ಸ್ವಯಂಸೇವಕರಿದ್ದಾರೆ. ಕಳೆದ ಸಾಲಿನ ತಾಲೂಕು ಅತ್ಯುತ್ತಮ ಎನ್‌ಎಸ್‌ಎಸ್ ಘಟಕ ಪ್ರಶಸ್ತಿಗೆ ಕೂಡಾ ಕಾಲೇಜು ಭಾಜನವಾಗಿರುತ್ತದೆ. ಈ ಸಾಧನೆಗೆ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಕೆ ಚಂದ್ರಶೇಖರ್, ಪುಷ್ಪ ಎನ್. ಹಾಗೂ ಭೋದಕ-ಭೋದಕೇತರ ವೃಂದದವರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಷ್ಟೀಯ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಗಳ ಆಶ್ರಯದಲ್ಲಿ ನಡೆಯುವ ಈ ಶಿಬಿರದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಎನ್‌ಎಸ್‌ಎಸ್ ಸ್ವಯಂಸೇವಕರು ಭಾಗವಹಿಸಲಿದ್ದಾರೆ. ಈ ಸಾಹಸ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಪರಿಸರ ಪ್ರಜ್ಞೆ, ಸಹಬಾಳ್ವೆ ಹಾಗೂ ರಾಷ್ಟ್ರೀಯ ಏಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.
