ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ಕಾರ್ಯಗಾರ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಾಣಿಜ್ಯ ವಿಭಾಗವು ಒಂದು ಕ್ರಿಯಾತ್ಮಕ ವಿಭಾಗವಾಗಿದ್ದು, ವಿದ್ಯಾರ್ಥಿಗಳು ವಾಣಿಜ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಅರಿವನ್ನು ಹೊಂದಿರಬೇಕು. ಮುಖ್ಯವಾಗಿ ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ವಿದ್ಯಾರ್ಥಿಗಳು, ಬ್ಯಾಂಕಿನ ಕಾರ್ಯನಿರ್ವಹಣೆಯ ಬಗ್ಗೆ ಅಧ್ಯಯನವನ್ನು ಮಾಡಬೇಕಾಗಿದೆ. ಸೂಕ್ತ ಮಾಹಿತಿಯೊಂದಿಗೆ ನಾವು ಕಲಿತಾಗ ಕಲಿಕೆ ಪರಿಣಾಮಕಾರಿ ಆಗುವುದರೊಂದಿಗೆ, ಸಾಕಷ್ಟು ಅನುಭವವನ್ನು ಪಡೆಯಬಹುದು ಎಂದು ಹೇಳಿದರು.
ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ. ಪೈ, ಪೂರ್ಣಿಮಾ ಡಿ.ಎಸ್., ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಏಂಜಲ್ ಡಿ’ಸೋಜಾ ಸ್ವಾಗತಿಸಿದರು. ದಯನ್ ದೇವಯ್ಯ ವಂದಿಸಿ, ಬಿ.ವಿ. ಅನು ಕಾರ್ಯಕ್ರಮ ನಿರೂಪಿಸಿದರು.

