ಸಂತ ಫಿಲೋಮಿನಾ ಪ.ಪೂ ಕಾಲೇಜಿನ ಉಪನ್ಯಾಸಕ ಚಂದ್ರಾಕ್ಷರಿಗೆ ರಾಷ್ಟ್ರಮಟ್ಟದ ಮೆಸಂಜರ್ ಆಫ್ ಫಿಸ್ ಸ್ಟಾರ್ ಪ್ರಶಸ್ತಿ
Monday, November 3, 2025
ಪುತ್ತೂರು: ಸಂತ ಫಿಲೋಮಿನಾ ಪ.ಪೂ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಚಂದ್ರಾಕ್ಷ ಇವರಿಗೆ ಅ.26 ರಂದು ಮೂಡಬಿದ್ರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಗೆ ನೀಡಿದ ನಿಸ್ವಾರ್ಥ ಸೇವೆಯನ್ನು ಗಮನದಲ್ಲಿಟ್ಟುಕೊಂಡು, ಸ್ಕೌಟ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆಯು ತನ್ನ ಉನ್ನತ ಮೆಸಂಜರ್ ಆಫ್ ಫಿಸ್ ಸ್ಟಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆಯ 2023 ನೇ ಸಾಲಿನ ರಾಷ್ಟ್ರಮಟ್ಟದ ಮೆಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಎಂಟು ಮಂದಿಯಲ್ಲಿ ಚಂದ್ರಾಕ್ಷ ಒಬ್ಬರಾಗಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ಕಾಲೇಜಿನ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.