ಬೃಹತ್ ಉದ್ಯೋಗ ಮೇಳಕ್ಕೆ ಕಾಪು ಶಾಸಕ ಗುರ್ಮೆ ಚಾಲನೆ
ಅವರು ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಮೂಡುಬೆಳ್ಳೆ ಸಮೀಪದ ಕುಂತಳನಗರ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಕನ್ವೆಂಶನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಸಭಾಭವನದಲ್ಲಿ ನಡೆದ "ಬೃಹತ್ ಉದ್ಯೋಗ ಮೇಳ" ವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮಾತನಾಡಿ, ಗ್ರಾಮಿಣ ಭಾಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಯುವಜನಾಂಗದ ಉಜ್ವಲ ಭವಿಷ್ಯಕ್ಕೆ ಹಾದಿ ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದರು. ಮಾಜಿ ಪ್ರಮೋದ್ ಮಧ್ವರಾಜ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಯೋಗೀಶ್ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ, ವಿಜಯ ಹೆಗ್ಡೆ, ಉದ್ಯಮಿ ಹರಿಪ್ರಸಾದ್ ಶೆಟ್ಟಿ, ನವೀನ್‌ಚಂದ್ರ ಜೆ.ಶೆಟ್ಟಿ, ಎಂ.ಆರ್.ಜಿ ಗ್ರೂಪ್‌ನ ಈಶ್ವರ್ ಪ್ರಸಾದ್ ಶೆಟ್ಟಿ, ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ಹರಿಕುಮಾರ್, ಕಾಪು ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ ಸುಕುಮಾರ್, ಪ್ರಾಂಶುಪಾಲ ಶರತ್ ಆಳ್ವ, ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ.ಶೆಟ್ಟಿ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಕೋಶಾಧಿಕಾರಿ ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ, ರಂಜನಿ ಹೆಗ್ಡೆ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಉದ್ಯೋಗ ಮೇಳದ ರುವಾರಿ, ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಸ್ವಾಗತಿಸಿದರು. ಜಾಬ್‌ಫೇರ್ ಮುಖ್ಯಸ್ಥೆ ಡಾ. ದಿವ್ಯರಾಣಿ ಪ್ರದೀಪ್ ಪ್ರಾಸ್ತಾವಿಕವಾಗಿ ಮಾತನಾಡಿದರು