ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ


ಸುಬ್ರಹ್ಮಣ್ಯ: ಸುಳ್ಯದ ಎಒಎಲ್‌ಇ ಕಮಿಟಿ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಬೆಳ್ಳಿರಥದ ಸಮರ್ಪಣೆ ಕಾರ್ಯಕ್ರಮ ವಿವಿಧ ವೈಧಿಕ, ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ, ಸಂಭ್ರಮದಿಂದ ಸೋಮವಾರ ನಡೆಯಿತು.

ಬೆಳ್ಳಿರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಅಂಗವಾಗಿ ರವಿವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ ಮತ್ತು ವಾಸ್ತು ಪೂಜೆ ಜರುಗಿತ್ತು. ಸೋಮವಾರ ಬೆಳಗ್ಗೆ ಸುಬ್ರಹ್ಮಣ್ಯ ಹೋಮ, ಪವಮಾನ ಹೋಮ ನಡೆದು, ಬಳಿಕ ಪೂರ್ಣಾಹುತಿಗೊಂಡು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮ ಜರುಗಿತು. ಬಳಿಕ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೆಳ್ಳಿ ರಥವನ್ನು ನಿರ್ಮಿಸಿ ಕೊಡುಗೆಯಾಗಿ ಸಮಪಿಸಿದ ಡಾ. ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಅಮರಶ್ರೀ ಕುರುಂಜಿ ಕಾಂತಮಂಗಲ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕೃತಜ್ನತಾ ಪತ್ರವನ್ನು ನೀಡಲಾಯಿತು.

ಡಾ.ರೇಣುಕಾಪ್ರಸಾದ್ ಕೆ.ವಿ., ಡಾ.ಜ್ಯೋತಿ ಆರ್. ಪ್ರಸಾದ್, ಮೌರ್ಯ ಆರ್. ಪ್ರಸಾದ್ ಕುರುಂಜಿ, ಅಭಿಜ್ನಾ ಗೋಕುಲ್, ಗೋಕುಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಮಾಜಿ ಸ್ಪೀಕರ್ ಬೋಪಯ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ವಿನಯ ಗುರೂಜಿ, ಎಂಎಲ್‌ಸಿ ಬೋಜೇಗೌಡ, ಡಾ. ಪ್ರಭಾಕರ ಭಟ್ ಕಲ್ಲಡ್ಕ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಇಂಜಾಡಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಸಮಿತಿ ಸದಸ್ಯರು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಬೆಳಗಾವಿ ವಿಟಿಯು ರಿಜಿಟ್ರಾರ್ ಉಜ್ವಲ್ ಯು.ಜೆ., ರಥಶಿಲ್ಪಿ ರಾಜಗೋಪಾಲಾಚಾರ್ಯ, ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಎನ್.ಎ. ರಾಮಚಂದ್ರ, ಜಿ. ಕೃಷ್ಣಪ್ಪ, ಎಸ್.ಎನ್. ಮನ್ಮಥ, ದಿನೇಶ್ ಮಡಪ್ಪಾಡಿ, ಪಿ.ಎಸ್. ಗಂಗಾಧರ, ಪಿ.ಸಿ. ಜಯರಾಮ ಸೇರಿದಂತೆ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article