ಕುಕ್ಕೆ ಸುಬ್ರಹ್ಮಣ್ಯ: ‘ಮೂಲಮೃತ್ತಿಕಾ ಪ್ರಸಾದ’ ವಿತರಣೆ

ಕುಕ್ಕೆ ಸುಬ್ರಹ್ಮಣ್ಯ: ‘ಮೂಲಮೃತ್ತಿಕಾ ಪ್ರಸಾದ’ ವಿತರಣೆ


ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು) ಇಂದು ಶುದ್ಧ ಏಕಾದಶಿಯ ಶನಿವಾರದಂದು ತೆಗೆಯಲಾಯಿತು. ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.


ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೃತ್ತಿಕಾ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರು ತೆಗೆದು ಭಕ್ತಾಧಿಗಳಿಗೆ ನೀಡಿದರು. ಇದು ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಮಹಾಪ್ರಸಾದ. ಯಾವುದೇ ದೇವಳದಲ್ಲಿ ಕೂಡಾ ಇಂತಹ ಪ್ರಸಾದ ದೊರಕುವುದಿಲ್ಲ. ಇದು ಕುಕ್ಕೆ ಕ್ಷೇತ್ರದಲ್ಲಿ ಮಾತ್ರ ಭಕ್ತರಿಗೆ ದೊರಕುವುದು ವಿಶೇಷ.

ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ತೆಗೆಯಲಾಗುವುದು. ಈ ಮೃತ್ತಿಕಾ ಪ್ರಸಾದವು ರೋಗ ನಿರೋಧಕ, ಸಂತಾನ ಕಾರಕ ಮತ್ತು ಚರ್ಮರೋಗಗಳ ಪರಿಹಾರಕ್ಕೆ ದಿವ್ಯ ಔಷಧ. ಕ್ಷೇತ್ರದ ಈ ಮುಖ್ಯ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾದಿಗಳ ನಿವಾರಣೆಗೂ ಭಕ್ತ ಜನರು ಕೊಂಡೊಯ್ಯುತ್ತಾರೆ. ಇದನ್ನು ತೀರ್ಥದಲ್ಲಿ ಸೇವಿಸುವುದರ ಮೂಲಕ ಅಥವಾ ಶರೀರಕ್ಕೆ ರಕ್ಷೆಯಾಗಿ ಕಟ್ಟಿಕೊಳ್ಳುವುದರ ಮೂಲಕ ಭಕ್ತಾಧಿಗಳು ಈ ಪ್ರಸಾದವನ್ನು ತಮ್ಮೊಳಗೆ ಧಾರಣೆ ಮಾಡುತ್ತಾರೆ. ಆದರೆ ಇದನ್ನು ಶರೀರದಲ್ಲಿ ಇರಿಸಿಕೊಂಡಾಗ ಅಪವಿತ್ರವಾಗದಂತೆ ತಡೆಯುವುದು ಮಾತ್ರ ಅತ್ಯಂತ ಪ್ರಮುಖವಾದ ಅಂಶವಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article