ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78ನೆ ಜನ್ಮದಿನ ಆಚರಣೆ
ದೇವಳ ನೌಕರರು, ಊರಿನ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳವರು ಪೂಜ್ಯ ಹೆಗ್ಗಡೆಯವರಿಗೆ ಫಲಪುಷ್ಪ ಹಾರ ಅರ್ಪಿಸಿ ಶ್ರದ್ಧಾಭಕ್ತಿಯಿಂದ ಶುಭ ಹಾರೈಕೆಗಳನ್ನು ಅರ್ಪಿಸಿದರು.
ಮೂಡಬಿದ್ರೆಯ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ವಿಶೇಷ ಪೂಜೆಯ ಪ್ರಸಾದ ನೀಡಿ ಆಶೀರ್ವದಿಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಜೀವಂಧರ ಜೈನ್ ಮತ್ತು ಪುತ್ರರು, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಮೊದಲಾದವರು ಹೆಗ್ಗಡೆಯವರಿಗೆ ಜನ್ಮದಿನದ ಶುಭ ಹಾರೈಕೆಗಳನ್ನು ಅರ್ಪಿಸಿದರು.
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಠದಲ್ಲಿಯೆ ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭ ಹಾರೈಸಿದರು.
ರಾಷ್ಟ್ರಪತಿ, ಪ್ರಧಾನಿಯಿಂದ ಶುಭಾಶಯ..
ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.
ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.
ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ. ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.