ಸಾಲುಮರದ ತಿಮ್ಮಕ್ಕ ನಿಧನಕ್ಕೆ ಹೆಗ್ಗಡೆ ಸಂತಾಪ
Friday, November 14, 2025
ಉಜಿರೆ: ಸಾಲುಮರದ ತಿಮ್ಮಕ್ಕ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಗಿಡ-ಮರಗಳನ್ನು ಬೆಳೆಸುವುದರೊಂದಿಗೆ ಪರಿಸರ ಸಂರಕ್ಷಣೆ ಬಗ್ಗೆ ವಿಶೇಷ ಕಾಳಜಿವಹಿಸುತ್ತಿದ್ದ ಅವರು ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಗೆ ಅರಿವು, ಜಾಗೃತಿ ಮೂಡಿಸುತ್ತಿದ್ದರು.
ಮಾಗಡಿ ತಾಲ್ಲೂಕಿನಲ್ಲಿ ರಸ್ತೆ ಬದಿ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ಅವರು ಸಾಲುಮರದ ತಿಮ್ಮಕ್ಕ ಎಂದೇ ಚಿರಪರಿಚಿತರಾದರು. ಸಸಿಗಳನ್ನು ಮಕ್ಕಳಂತೆ ಪ್ರೀತಿಯಿಂದ ಸಾಕಿ ಸಲಹಿದ್ದಾರೆ.
ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅವರು ಜಾಗೃತಿ ಮೂಡಿಸಿದ್ದಾರೆ. 2014 ರ ಆಗೋಸ್ತು 18 ರಂದು ಅವರು ಧರ್ಮಸ್ಥಳಕ್ಕೆ ಬಂದು ಪರಿಸರದ ಸಂರಕ್ಷಣೆ ಬಗ್ಗೆ ಮಾತುಕತೆ ನಡೆಸಿದ್ದರು. ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಿದ ನೆನಪು ಇನ್ನೂ ಸ್ಮರಣೀಯವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.