ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿ ಬಿಡುಗಡೆ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿ ಬಿಡುಗಡೆ


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ  ವೀರೇಂದ್ರ ಹೆಗ್ಗಡೆಯವರು ಕರ್ನಾಟಕ ರಾಜ್ಯದಲ್ಲಿ ಗ್ರಾಮಾಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತೀಯ ಜೀವ ವಿಮಾ ನಿಗಮವು ತಮ್ಮ ವಿಮಾ ಸೇವೆಯನ್ನು ಗ್ರಾಮ ಗ್ರಾಮಗಳಿಗೆ ನೀಡುತ್ತಿರುವ ಪಾಲುದಾರ ಸಂಸ್ಥೆಯಾದ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಜಂಟಿಯಾಗಿ ಸೇರಿಕೊಂಡು ಹೆಗ್ಗಡೆಯವg ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಲಾಯಿತು. 

ಭಾರತೀಯ ಜೀವ ವಿಮಾ ನಿಗಮ ಮತ್ತು ಗ್ರಾಮಾಭಿವೃದ್ಧಿ ಯೋಜನೆ ಕರ್ನಾಟಕ ರಾಜ್ಯದ ಗ್ರಾಮದಲ್ಲಿರು ಆರ್ಥಿಕ ಹಿಂದುಳಿದ ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗಾಗಿವಿಶೇಷ ಕಿರು ಮೈಕ್ರೋ ಇನ್ಸ್ಯೂರೆನ್ಸ್ ಸೇವೆ ನೀಡುವ ಮೂಲಕ ದೇಶಕ್ಕೆ ಮಾದರಿ ವ್ಯವಸ್ಥೆಯಾಗಿದೆ. ಈ ಸಾಧನೆಯೊಂದಿಗೆ ಅನೇಕ ಕ್ಷೇತ್ರಗಳಲ್ಲಿ ಪೂಜ್ಯರು ನೀಡಿದ ಅನನ್ಯ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಮೂರು ಸಂಸ್ಥೆಗಳು ಭಾರತೀಯ ಅಂಚೆ ಇಲಾಖೆಯಿಂದ  ಹೆಗ್ಗಡೆಯವರ ಅಂಚೆ ಚೀಟಿಯನ್ನು  ಹೆಗ್ಗಡೆಯವರ ಜನ್ಮ ದಿನದಂದು ಬಿಡುಗಡೆಗೊಳಿಸಿದ್ದು ವಿಶೇಷವಾಗಿತ್ತು. ಶೃತಿ ಎಂಬ ರೋಬೊ ಅಂಚೆ ಚೀಟಿಯನ್ನು ಬಿಡುಗಡೆಗೆ ವೇದಿಕೆಗೆ ತಂದುಕೊಟ್ಟಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಮುಖ್ಯ ಅತಿಥಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂರವರ ಮೊಮ್ಮಗ, ಡಾ. ಕಲಾಂ ಪ್ರತಿಷ್ಠಾನದ ಸಹಸ್ಥಾಪಕರು ಮತ್ತು ವ್ಯವಸ್ಥಾಪಕ ಟ್ರಸ್ಟಿಗಳಾದ ಎಪಿಜೆಎಂಜೆ ಶೇಯ್ಕ್ ಸಲೀಂ, ಕಲಾಂ ಮತ್ತು ಡಾ.  ಡಿ. ವೀರೇಂದ್ರ ಹೆಗ್ಗಡೆಯವರ ಚಿಂತನೆಗಳು ಒಂದೇದಾರಿಯಲ್ಲಿ ಸಾಗಿದ್ದು,ಈ ಸಂಬಂಧವನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಅಬ್ದುಲ್ ಕಲಾಂ ಫೌಂಡೇಶನ್ ಗ್ರಾಮಾಭಿವೃದಿ ಯೋಜನೆಯೊಂದಿಗೆ ಮುಂದಿನ ದಿನಗಳಲ್ಲಿ ಉತ್ತಮ ಸಂಬಂಧವನ್ನು ಬೆಸೆಯಲಿದೆ. ಹಾಗೆಯೇ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆಅಬ್ದುಲ್ ಕಲಾಂ ಪ್ರತಿಷ್ಠಾನದ ಸಂಗ್ರಹಾಲಯದಿಂದಅಬ್ದುಲ್‌ಕಲಾಂರವರು ಬಳಸುತ್ತಿದ್ದ ಅಮೂಲ್ಯ ವಸ್ತುವನ್ನುಕೊಡುಗೆಯಾಗಿ ನೀಡುವುದಾಗಿ ತಿಳಿಸಿದರು. 

ಮರ್ಸಿಡಿಸ್ ಬೆಂಝ್ ಕಾರು ಕಂಪನಿಯ ಪ್ರಧಾನ ವ್ಯವಸ್ಥಾಪಕ ಸಂಜಯ್‌ಕೊಚರ್ ಮಾತನಾಡಿ ಕಾರ್ ಮ್ಯೂಸಿಯಂನಲ್ಲಿ ಅಪೂರ್ವ ಕಾರುಗಳ ಸಂಗ್ರಹ ನೋಡಿ ಸಂತೋಷವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉಡುಪಿಯ ಮುಖ್ಯ ಅಂಚೆ ಅಧಿಕ್ಷಕ ರಮೇಶ್ ಪ್ರಭು, ಭಾರತೀಯ ಜೀವ ವಿಮಾ ನಿಗಮದ ದಕ್ಷಿಣ ವಲಯದ ಹಿರಿಯ ವಲಯಾಧಿಕಾರಿ ಪುನಿತ್ ಕುಮಾರ್ ಶುಭ ಕೋರಿದರು.

ಉದ್ಘಾಟಿಸಿ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಜೀವವಿಮಾ ಕಂಪೆನಿಯಿಂದಾಗಿ ಸಾರ್ವಜನಿಕರುಇಂದುಜಾಗೃತರಾಗಿದ್ದು, ತಾವಾಗಿಯೆ ವಿಮೆ ಮಾಡಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ. ಸಾಲಗಾರರಿಗೂ ವಿಮೆ ಮಾಡಿ ಭದ್ರತೆ ನೀಡುತ್ತಿರುವ ಬಗ್ಗೆಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಜೀವವಿಮೆಯು ನಮ್ಮ ಕಷ್ಟ ಕಾಲದಲ್ಲಿ ಯೋಗಕ್ಷೇಮ ಕಾಪಾಡಲು ಸಹಕಾರಿಯಾಗಿದೆ ಎಂದರು ಎಲ್‌ಐಸಿ, ಭಾರತೀಯ ಅಂಚೆ ಇಲಾಖೆ, ಎಪಿಜೆಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಹೆಗ್ಗಡೆಯವರನ್ನು ಗೌರವಿಸಲಾಯಿತು. 

ಕ್ಷೇಮವನz ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾಅಮಿತ್, ಯೋಜನೆಯ ಟ್ರಸ್ಟಿ ಉದಯಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ  ಅನಿಲ್ ಕುಮಾರ್‌ಎಸ್.ಎಸ್., ಪುತ್ತೂರು ಅಂಚೆ ಅಧೀಕ್ಷಕರಾದ ಕೆ. ರವೀಂದ್ರ ನಾಯಕ್ ಉಪಸ್ಥಿತರಿದ್ದರು.

ಎಲ್‌ಐಸಿಯ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿಎನ್. ಭಟ್ ಸ್ವಾಗತಿಸಿದರು. ಭಾರತೀಯ ಜೀವ ವಿಮಾ ನಿಗಮ ಉಡುಪಿ ವಿಭಾಗದ ಮೈಕ್ರೋ ಇನ್ಶುರೆನ್ಸ್ ಮೆನೆಜರ್ ದಿನೇಶ್ ಪ್ರಭು ವಂದಿಸಿದರು. ಗ್ರಾಮಾಭಿವೃದ್ಧಿವ ಯೋಜನೆಯ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೆಜಸ್ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article