ಸಕಾರಾತ್ಮಕ ಚಿಂತನೆಗಳು ನಮ್ಮ ಮನೋಬಲವನ್ನು ಹೆಚ್ಚಿಸುತ್ತದೆ: ಸ್ವಾಮಿ ಆತ್ಮಜ್ಞಾನಂದ
ಎಸ್.ಡಿ.ಎಂ. ಐಟಿ ಕಾಲೇಜು: ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜೀವನದಲ್ಲಿ ವ್ಯಕ್ತಿ ಗೌರವ ಮತ್ತು ವೃತ್ತಿ ಗೌರವದ ಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸರಿ-ತಪ್ಪಿನ ಅಂತರವನ್ನು ಮನಗಾಣುವ ಯೋಚಾನ ಶಕ್ತಿಯನ್ನು ರೂಢಿಸಿಕೊಳ್ಳುವುದರ ಜೊತೆಗೆ ಸ್ವಂತ ಚಿಂತನೆ ಮತ್ತು ಪ್ರಯತ್ನಗಳಿಂದ ಯಶಸ್ಸಿನ ಮಾರ್ಗದೆಡೆಗೆ ಸಾಗಬೇಕು. ಆಗ ಸ್ವಾಮಿ ವಿವೇಕಾನಂದರ ಚಿಂತನೆಯಂತೆ ಸಮಾಜ ಮತ್ತು ದೇಶ ಸದೃಢವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಾರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಬೌದ್ಧಿಕ ಕ್ಷಮತೆಯನ್ನು ವಿಸ್ತರಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ಬ್ರೆಜಿಲ್ ದೇಶದ ರಿಯೋ ದೆ ಜನೈರೋದಲ್ಲಿರುವ ರಾಮಕೃಷ್ಣ ವೇದಾಂತ ಆಶ್ರಮದ ಮುಖ್ಯಸ್ಥ ಸ್ವಾಮಿ ಆತ್ಮಜ್ಞಾನಂದ ಜೀರವರನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಾ. ಸತೀಶ್ಚಂದ್ರ ಎಸ್ ಶಾಲು ಹೊದಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್ ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಅಪೇಕ್ಷಾ ಜೈನ್ ನಿರೂಪಿಸಿ, ಎಸ್.ಡಿ.ಎಂ. ಐಟಿ ಕಾಲೇಜಿನ ಎನ್.ಎಸ್.ಎಸ್ ಸಂಯೋಜಕ ಮಹೇಶ್ ಪಾಟೀಲ್ ವಂದಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದಲ್ಲಿ ನಡೆಯುತ್ತಿರುವ ಎಲ್ಲಾ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉದ್ದೇಶ ಮತ್ತು ಆಶಯ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣದ ಜೊತೆಗೆ ಜೀವನ ಶಿಕ್ಷಣವನ್ನು ಕಲ್ಪಿಸಿಕೊಡುವುದು. ಈ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢವಾಗುತ್ತಾರೆ. ವೈಚಾರಿಕ ಚಿಂತನೆಗಳನ್ನು ಬೆಳೆಸಿಕೊಂಡು ಸಾಮಾಜ ಜೀವಿ ಮತ್ತು ದೇಶದ ಉತ್ತಮ ನಾಗರಿಕರಾಗಿ ಹೊರ ಹೊಮ್ಮುತ್ತಾರೆ. ಈ ದೃಷ್ಟಿಯಲ್ಲಿ ವಿವೇಕ ಜಾಗೃತಿಯಂತ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ. -ಡಾ. ಸತೀಶ್ಚಂದ್ರ ಎಸ್., ಕಾರ್ಯದರ್ಶಿಗಳು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ
