ಪ.ಪಂ. ಸದಸ್ಯ ಬಶೀರ್ ನೇಣು ಬಿಗಿದು ಆತ್ಮಹತ್ಯೆ
Friday, November 7, 2025
ಉಜಿರೆ: ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಬಶೀರ್ (54) ಅವರು ಅ6 ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಮನೆಯಲ್ಲಿ ಪತ್ತೆಯಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಅವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.