ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ನಿಧನ

ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ನಿಧನ


ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿವೆ.

ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದು, ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವರಾಗಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article