ಪುಂಜಾಲಕಟ್ಟೆ ಎರಡು ದಿನಗಳ ರಾಜ್ಯಮಟ್ಟದ ಸ್ವಸ್ತಿಕ್ ಕಬಡ್ಡಿ 2025ಗೆ ಚಾಲನೆ
ದ.ಕ. ಜಿಲ್ಲಾ ಅಡಿಕೆ ಮತ್ತು ಕೃಷಿ ಉತ್ಪನ್ನ ವರ್ತಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮೂಡಾಯೂರು ಅವರು ಸ್ವಸ್ತಿಕ್ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ ಮಾತನಾಡಿ, ಕಬಡ್ಡಿಗೆ ಪ್ರೋತ್ಸಾಹ ನೀಡುತ್ತಿರುವ ಸ್ವಸ್ತಿಕ್ ಕ್ಲಬ್‌ನ ಸಾಧನೆ ದಾಖಲೆಯಾಗಿದೆ ಎಂದರು.
ಬೆಳ್ತಂಗಡಿ ಬಿಜಪಿ ಪ್ರ.ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಸಹಕಾರ್ಯದರ್ಶಿ ಫ್ರಾನ್ಸಿಸ್ ವಿ.ವಿ. ಮಾತನಾಡಿ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ಕಬಡ್ಡಿ ಪಂದ್ಯಾಟದಿಂದ ಆಟಗಾರರಿಗೆ ಹೆಚ್ಚಿನ ಅವಕಾಶವಾಗಿದೆ. ಇದಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದರು.
ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಲಾತಬೆಟ್ಟು ಪ್ರಾ.ಕೃ.ಸ. ಸಂಘದ ನಿರ್ದೇಶಕ ಸುಂದರ ನಾಯ್ಕ ಕ್ರೀಡಾಂಗಣ ಉದ್ಘಾಟಿಸಿದರು.
ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಶಾರದಾ, ವಾಮದಪದವು ಪ್ರಾ.ಕೃ.ಸ. ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೌಶಿಕ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಕಬಡ್ಡಿ ತೀರ್ಪುಗಾರ ಹಬೀಬ್ ಕಲ್ಲಡ್ಕ, ವೇಣೂರು ಪ್ರಾ.ಕೃ.ಸಂಘದ ನಿರ್ದೇಶಕ ದೇಜಪ್ಪ ಪೂಜಾರಿ, ಪಿಲಾತಬೆಟ್ಟು ಪ್ರಾ.ಕೃ.ಸ. ಸಂಘದ ನಿರ್ದೇಶಕಿ ಹರ್ಷಿಣಿ ಪುಷ್ಪಾನಂದ, ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್ ಸನಿಲ್, ಗುತ್ತಿಗೆದಾರ ಪುಷ್ಪಾನಂದ, ಕಜೆಕಾರು ಗ್ರಾ.ಪಂ. ಅಧ್ಯಕ್ಷ ದೇವದಾಸ ಅಬುರ, ಮಾ. ಅಯಾಂಶ್, ಸಂಘದ ಗೌರವಾಧ್ಯಕ್ಷ ಅಬ್ದುಲ್ಲಾ ಪಿ., ಕಾರ್ಯದರ್ಶಿ ಜಯರಾಜ ಅತ್ತಾಜೆ, ಸಂಚಾಲಕ ರಾಜೇಶ್ ಪಿ.ಬಂಗೇರ, ಸಹ ಸಂಚಾಲಕ ಅಬ್ದುಲ್ ಹಮೀದ್, ಮಾಜಿ ಅಧ್ಯಕ್ಷ ಮಾಧವ ಬಂಗೇರ, ರಫೀಕ್, ಪುರುಷೋತ್ತಮ ಶೆಟ್ಟಿಗಾರ್, ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾಬು ಸಫಲ್ಯ ವಗ್ಗ ಅವರಿಗೆ ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಭಾಕರ ಪಿ.ಎಂ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ವಿಭಾಗ, ದ.ಕ. ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ ನಡೆಯಿತು.