ಬಂಟ್ವಾಳದಲ್ಲಿ ಲೋಕಅದಾಲತ್ 6587 ಪ್ರಕರಣಗಳು ಇತ್ಯರ್ಥ
ಸಿವಿಲ್ ದಾವೆಯಲ್ಲಿ 12 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಇದರಲ್ಲಿ ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿವಿಧ ಶುಲ್ಕ ಪ್ರಕರಣಗಳಿಗೆ ಸಂಬಂಧಿಸಿ 9,95,098 ರೂ. ಮೊತ್ತ ವಸೂಲಾಗಿದೆ.
837 ಕ್ರಿಮಿನಲ್ ಪ್ರಕರಣಗಳು ಇತ್ಯರ್ಥಗೊಂಡು, ಪ್ರಕರಣಗಳು, ಎಂಎಂಆರ್‌ಡಿ ಪ್ರಕರಣಗಳು, ಚೆಕ್ ಮೋಟಾರು ವಾಹನ ಬೌನ್ಸ್ ಪ್ರಕರಣಗಳು ಸೇರಿದಂತೆ 88,60,000 ರೂ. ಮೊತ್ತ ವಸೂಲಾಗಿದೆ. ಅದೇ ರೀತಿ ದಾವಾ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿ 5738 ಕೇಸುಗಳು ಇತ್ಯರ್ಥವಾಗಿದ್ದು, 1,19,51,200 ರೂ. ಮೊತ್ತವನ್ನು ವಸೂಲು ಮಾಡಲಾಗಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಆಸ್ತಿ ವಿವಾದಗಳು, ವಿಭಾಗ ಮೊಕದ್ದಮೆಗಳು, ಹಣ ವಸೂಲಿ ಪ್ರಕರಣಗಳು, ನಿರ್ಧಿಷ್ಟ ಪರಿಹಾರ ಕಾಯ್ದೆಯಡಿಯಲ್ಲಿ ದಾಖಲಾದ ಮೊಕದ್ದಮೆಗಳು, ಮೋಟಾರು ವಾಹನ, ಎಂಎಂಆರ್‌ಡಿ, ಬ್ಯಾಂಕ್ ವಸೂಲಾತಿ, ವಿವಾಹ ಸಮನ್ವಯ, ಚೆಕ್‌ಬೌನ್ಸ್ ಪ್ರಕರಣಗಳು ಮತ್ತು ಇತರ ರಾಜಿಯೋಗ್ಯ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಸಿವಿಲ್ ಮತ್ತು ಕ್ರಿಮಿನಲ್ ವಿವಾದಗಳನ್ನು ಪರಿಹರಿಸಿ ಕೊಳ್ಳಲಾಯಿತು.
ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರು, ಬಂಟ್ವಾಳ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ., ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್. ಅವರ ಸಮಕ್ಷಮದಲ್ಲಿ ಪ್ರಕರಣಗಳು ಇತ್ಯರ್ಥಗೊಂಡವು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚಾರ್ಡ್ ಕೋಸ್ತಾ ಎಂ. ಹಾಗೂ ಹಿರಿಯ, ಕಿರಿಯ ವಕೀಲರು ಉಪಸ್ಥಿತರಿದ್ದರು.