ಪ್ರತಿಭಾ ಕಾರಂಜಿಯಲ್ಲಿ ತಾಲೂಕಿಗೆ ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ
Tuesday, December 2, 2025
ಬಂಟ್ವಾಳ: ಬಿ.ಸಿ.ರೊಡಿನ ಬಿ.ಮೂಡ ಅಜ್ಜಿಬೆಟ್ಟುವಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಮಲ್ಲಿಕಾರ್ಜುನ ಮತ್ತು ಮರೆಮ್ಮ ದಂಪತಿ ಪುತ್ರಿ ಚಂದ್ರಕಲಾ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ರಂಗೋಲಿ ಸ್ಪರ್ಧೆ (ಹಿರಿಯ ವಿಭಾಗ)ದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಇದೀಗ ಆಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.