ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ: ಸವಾರ ಗಂಭೀರ
Monday, December 22, 2025
ಬಂಟ್ವಾಳ: ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದು, ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾ.ಹೆ.ಯ ತುಂಬೆ ರಾಮಲ್ ಕಟ್ಟೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಉಸ್ಮಾನ್ ಅವರು ಅಂಗಡಿಯಿಂದ ಹಾಲು ಖರೀದಿಸಿ ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬಳಿಕ ಅದರ ಚಾಲಕ ವಾಹನ ಸಮೇತವಾಗಿ ಪರಾರಿಯಾಗಿದೆ.
ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್‌ಅವರು ರಸ್ತೆಗೆ ಬಿದ್ದು, ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ.
ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಢಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.