ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ: ತಲಾ ಒಂದು ಕಾರು, ರಿಕ್ಷಾ ವಶ
ತುಂಬೆ ನಿವಾಸಿ ಸಮೀರ್ (31) ಹಾಗೂ ಪಾಣೆಮಂಗಳೂರಿನ ಗೂಡಿನಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತ ಆರೋಪಿಗಳಿಂದ ತಲಾ ಒಂದು ಕಾರು, ಆಟೋರಿಕ್ಷಾ ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯನ್ವಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ ಟಿ. ಮತ್ತವರ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ತುಂಬೆ ಹನುಮನಗರದ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಗಳಿಬ್ಬರು ಕೆಎ-19-ಎಂಎನ್-3664ನೇ ನಂಬರಿನ ಕಾರು ಮತ್ತು ಕೆಎ-19-ಎಇ-0166ನಂಬರಿನ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಇವರಿಬ್ಬರನ್ನು ವಶಕ್ಕೆ ವಡೆದು ವಿಚಾರಣೆಗೊಳಪಡಿಸಿದಾಗ ಒಬ್ಬಾತ.
ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ, ವಾಹನಗಳನ್ನು ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ. ಗಾಂಜಾ ಪತ್ತೆಯಾಗಿದೆ.
ತಕ್ಷಣ ವಾಹನ ಹಾಗೂ ಮಾದಕ ವಸ್ತು ಗಾಂಜಾವನ್ನು ಸ್ವಾಧೀನ ಪಡಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.