ಜಂಪ್ ರೋಪ್ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಜಂಪ್ ರೋಪ್ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ


ಬಂಟ್ವಾಳ: ಕೊಪ್ಪಳ ಜಿಲ್ಲೆ ಕುಷ್ಟಗಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿಭಾಗದ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಭವಿಷ್ ಹಲಾಯಿ ಪ್ರಥಮ ಶ್ರೇಣಿಯೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭವಿಷ್ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದು, ಕೊಯಿಲ ಸ.ಪ್ರೌ. ಶಾಲೆಯ ದೈಹಿಕ ಶಿಕ್ಷಕರಾದ ಜನಾರ್ದನ ಅವರು ತರಬೇತಿ ನೀಡಿರುತ್ತಾರೆ.

ಅವರು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಅಶೋಕ್ ಸಾಲ್ಯಾನ್ ಹಾಗೂ ತುಳಸಿ ದಂಪತಿಯ ಪುತ್ರ.ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಸುಧಾಕರ ಪ್ರಭು ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article