ವೃದ್ಧಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ
ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ಪಾಯಸ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಬಡವರ ಸೇವೆ ಮಾಡುವುದರ ಮೂಲಕ ಸಮಾಜಕ್ಕೆ ಆದರ್ಶವಾಗಿದ್ದಾರೆ. ಇಲ್ಲಿನ ಶೌರ್ಯ ತಂಡ ಇಂತಹ ಸಮಾಜಮುಖಿ ಕಾರ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯವನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ಎಂದರು.
ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ,ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಬರ್ಟ್, ಪಂಚಾಯತ್ ಸದಸ್ಯ ಜನಾರ್ಧನ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸವಿತ, ಮೇಲ್ವಿಚಾರಕ ರಾಜೇಶ್, ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ, ಶೌರ್ಯ ತಂಡದ ಘಟಕ ಪ್ರತಿನಿಧಿ ಭಾಸ್ಕರ್, ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಹಳೆಗೇಟು, ಸೇವಾ ಪ್ರತಿನಿಧಿಗಳಾದ ವಿಜಯ, ಸುನಿತಾ, ವಸಂತಿ, ಪ್ರಫುಲ್ಲ, ಸಂಪಾ, ಉಷಾ, ರೇಖಾ ಕಾಡಬೆಟ್ಟು ಶೌರ್ಯ ಘಟಕದ ಪ್ರವೀಣ್ ಹಾಗೂ ಶೌರ್ಯ ತಂಡದ ಸದಸ್ಯರು ಹಾಗೂ ಜ್ಞಾನವಿಕಾಸದ ಸದಸ್ಯರು ಉಪಸ್ಥಿತರಿದ್ದರು.
ಮೇಲ್ವಿಚಾರಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.