ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Wednesday, December 31, 2025
ಕಾಸರಗೋಡು: ಕಾರು, ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನೀರ್ಚಾಲು ಎಂಬಲ್ಲಿ ನಡೆದಿದೆ.
ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರ ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಮುಹಮ್ಮದ್ ಝೈನುದ್ದೀನ್ (29) ಮೃತಪಟ್ಟವರು.
ಬೆಳಗ್ಗೆ ಪೆಟ್ರೋಲ್ ಬಂಕ್‌ನ ಕೆಲಸಕ್ಕೆಂದು ಬೈಕ್‌ನಲ್ಲಿ ಹೋಗುವಾಗ ನೀರ್ಚಾಲು ಕೆಳಗಿನ ಪೇಟೆಯಲ್ಲಿ ಅಪಘಾತ ನಡೆದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಬದಿಯಡ್ಕ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.