ಹುಲಿಕಲ್ ಘಾಟಿಯಲ್ಲಿ ಬಸ್ ಅಪಘಾತ: ಮಗು ಸಾವು
Tuesday, December 30, 2025
ಕುಂದಾಪುರ: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಹುಲಿಕಲ್ ಘಾಟಿಯಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.