ಡಿ.12 ರವರೆಗೆ ಆರ್‌ಟಿಓ ಪ್ರಕರಣಗಳಿಗೆ ಶೇ.50 ರಿಯಾಯಿತಿ
ಅವರು ಇಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಿಸದೇ ಇರುವ ಹಾಗೂ ಮ್ಯಾಯಾಲಯದಲ್ಲಿ ಇಥ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀರ್ಘ್ರದಲ್ಲಿ ಇತ್ಯರ್ಥ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಇಲ್ಲಿ ಬರುವವರು ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ಕು ಅಮಾಣ್ಯ ಹಾಗೂ ಬ್ಯಾಂಕ್ ಸಾಲ ವಸುಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಸೇವಾ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಕಳೆದ ವರ್ಷ ಲೋಕ ಅದಾಲತ್‌ನಲ್ಲಿ 2,41,605 ಪ್ರಕರಣಗಳಲ್ಲಿ 2,36,611 ಪ್ರಕರಣಗಳು ಇತ್ಯರ್ಥವಾಗಿದ್ದು, 15,47,49,578 ರೂ. ಸಂಗ್ರಹವಾಗಿದೆ ಎಂದು ತೀಳಿಸಿದರು.
ಜು.1 ರಿಂದ ಅ.6 ರವರೆಗೆ ನಡೆದ ಮೀಡಿಯೇಷನ್ ಡ್ರೈವ್‌ನಲ್ಲಿ ದ.ಕ. ಜಿಲ್ಲೆಯಲ್ಲಿ 39,803 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, 200 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಇದು ರಾಜ್ಯದಲ್ಲಿಯೇ 5ನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ಮೀಡಿಯೇಷನ್ ಡ್ರೈವ್ ಜನವರಿ 2 ರಿಂದ 90 ದಿನಗಳ ಕಾಲ ನಡೆಯಲಿದೆ.
ಮಂಗಳೂರಿನಲ್ಲೂ ಎಡಿಆರ್ ಕಟ್ಟಡ ನಿರ್ಮಾಣವಾಗಬೇಕಿತ್ತು ಆದರೆ ಇಲ್ಲಿ ಸೂಕ್ತ ಜಾಗವಿಲ್ಲದಿರುವುದರಿಂದ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿಲ್ಲ. -ಜೈಬುನ್ನಿಸಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ.