ಬಜಪೆ-ಕಿನ್ನಿಗೋಳಿ ಪ.ಪಂ ಚುನಾವಣೆ: ಡಿ.19 ರಿಂದ  ನಿಷೇಧಾಜ್ಞೆ  ಜಾರಿ

ಬಜಪೆ-ಕಿನ್ನಿಗೋಳಿ ಪ.ಪಂ ಚುನಾವಣೆ: ಡಿ.19 ರಿಂದ ನಿಷೇಧಾಜ್ಞೆ ಜಾರಿ

ಮಂಗಳೂರು: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಡಿ.19 ರ ಸಂಜೆ 5 ಗಂಟೆಯಿಂದ 21 ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ  ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

ಮದ್ಯದಂಗಡಿ ಮುಚ್ಚಲು ಆದೇಶ..

ಚುನಾವಣೆ ಹಿನ್ನೆಲೆಯಲ್ಲಿ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡಿ.19 ರ ಸಂಜೆ 5 ಗಂಟೆಯಿಂದ  21 ರ ರಾತ್ರಿ 12 ಗಂಟೆಯವರೆಗೆ  "ಶುಷ್ಕ ದಿನ" (ಆಡಿಥಿ ಆಚಿಥಿ) ಎಂದು ಘೋಷಿಸಿ ಈ ಸಂದರ್ಭದಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article