ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್: ಡಿ.21 ರಂದು ಚುನಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪಟ್ಟಣ ಪಂಚಾಯತ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳು ಡಿ.2 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಡಿ.9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿ.10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ.12 ಕೊನೆಯ ದಿನ. ಮತದಾನ ಡಿ.21 ರಂದು ಬೆಳಿಗ್ಗೆ 7 ಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಡಿ.23 ರಂದು ಮರು ಮತದಾನ ಇದ್ದಲ್ಲಿ ನಡೆಸಲಾಗುತ್ತದೆ. ಡಿ.24 ರಂದು ಮತ ಎಣಿಕೆಯು ಆಯಾ ತಾಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ.ಚುನಾವಣೆ ನೀತಿ ಸಂಹಿತೆಯು ಡಿ.2 ರಿಂದ 24 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.